ಉಳ್ಳಾಲ ಕ್ಲಷ್ಟರಲ್ಲಿ ಶಿಕ್ಷರಿಗೆ ಸನ್ಮಾನ
Saturday, February 1, 2025
ಉಳ್ಳಾಲದಲ್ಲಿ ಶಿಕ್ಷಕರಿಗೆ ಸನ್ಮಾನ
ಉಳ್ಳಾಲ ಕ್ಲಸ್ಟರ್ನಲ್ಲಿ ನಿವೃತ್ತರಾದ ಬಿಎಂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿಎಡಲಿನ್ ಸೆರಾಲಿನ್, ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಭವಾನಿ ಶಂಕರ್ ರವರನ್ನು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿದ್ದು ಸಮರ್ಥ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ. ಪ್ರಶಾಂತ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಚ್ಆರ್ ಈಶ್ವರ ವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀಯುತ ರಾಜೇಶ್, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ತಹಸಿನ್, ಭಾರತ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶ್ರೀಮತಿ ವಿನಯ, ಟಿಪ್ಪು ಸುಲ್ತಾನ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ, ಉಳ್ಳಾಲ ಕ್ಲಸ್ಟರ್ ನ ಎಲ್ಲಾ ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಭಾಗವಹಿಸಿದ್ದರು ಉಪಸ್ಥಿತರಿದ್ದರು ಬಿ ಎಂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯವಂತಿ ಸೋನ್ಸ್ ಸ್ವಾಗತಿಸಿ ಗುಚ್ಚ ಸಂಪನ್ಮೂಲ ವ್ಯಕ್ತಿ ಶ್ರೀ ಮೋಹನ್ ಕುಮಾರ್ ವಂದಿಸಿದರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 9ಗರಿ ಇಲ್ಲಿಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ಪ್ರಾರ್ಥನೆ ನೆರವೇರಿಸಿದರು. ಸೈಯದ್ ಮದನಿ ವಿದ್ಯಾ ಸಂಸ್ಥೆ ಹಳೆಕೋಟೆ ಇಲ್ಲಿನ ಮುಖ್ಯ ಶಿಕ್ಷಕರಾದ ಶ್ರೀ ಕೆ ಎಂ ಕೆ ಮಂಜನಾಡಿಯವರು ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.