ಉಳ್ಳಾಲ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ 2025
Monday, August 25, 2025
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಸೈಯದ್ ಮದನಿ ಆಂಗ್ಲ ಮಾಧ್ಯಮ ಶಾಲೆ ಕಲ್ಲಾಪು ಇದರ ಸಂಯುಕ್ತಾಶ್ರಯದಲ್ಲಿ ನಡೆದ
ಉಳ್ಳಾಲ ವಲಯದ 17 ವರ್ಷ ವಯೋಮಾನದ ಒಳಗಿನ ಮಕ್ಕಳ ವಾಲಿಬಾಲ್ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಿತ್ಯಾದರ ಆಂಗ್ಲ ಮಾಧ್ಯಮ ಶಾಲೆ ಪೆರ್ಮನ್ನೂರು, ದ್ವಿತೀಯ ಸ್ಥಾನವನ್ನು ಶ್ರೀರಾಮಕೃಷ್ಣ ಪ್ರೌಢಶಾಲಾ ಹರೇಕಳ, ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿಶ್ವಮಂಗಳ ಆಂಗ್ಲ ಮಾಧ್ಯಮ ಶಾಲೆ, ಕೊಣಾಜೆ , ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆ , ಪಡೆದಿರುತ್ತದೆ.
ಸಯ್ಯಿದ್ ಮದನಿ ವಿದ್ಯಾ ಸಂಸ್ಥೆ ಹಳೆಕೋಟೆ ಉಳ್ಳಾಲ ಇದರ ಮುಖ್ಯ ಶಿಕ್ಷಕರಾದ ಶ್ರೀಯುತ ಕೆ ಎಂ ಕೆ ಮಂಜನಾಡಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಟಿಪ್ಪು ಸುಲ್ತಾನ್ ಪದವಿಪೂರ್ವ ಕಾಲೇಜು 9 ಕೆರೆ ಇಲ್ಲಿನ ಪ್ರಾಂಶುಪಾಲರಾದ ಶ್ರೀಮತಿ ಪವಿತ್ರ ರೈ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಯುತ ತ್ಯಾಗಂ ಹರೇಕಳ, ಸೈಯದ್ ಮದನಿ ಆಂಗ್ಲ ಮಾಧ್ಯಮ ಶಾಲೆ ಕಲ್ಲಾಪು ಇದರ ಮುಖ್ಯ ಶಿಕ್ಷಕರಾದ ಶ್ರೀಮತಿ ನಸೀಮಾ ರವರು ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಂ ರಫೀಕ್ ತುಂಬೆ, ನೋಡಲ್ ಅಧಿಕಾರಿ ರಾಜೀವ್ ನಾಯಕ್, ಟಿಪ್ಪು ಸುಲ್ತಾನ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಶೀದ್, ಅಂಗ್ಕ ಮಾಧ್ಯಮ ಶಾಲೆಯ ಅಧ್ಯಾಪಕ ಖಾಲಿದ್ ಉಪಸ್ಥಿತರಿದ್ದರು. ಹಜರತ್ ಸೈಯದ್ ಮದನಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಸೂಲ್ ಖಾನ್ ರವರು ಸ್ವಾಗತಿಸಿ ವಂದಿಸಿದರು.